ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ (ಫೆ.17) ವಿಧಾನಸಭೆಯಲ್ಲಿ ಮಂಡಿಸಿದ್ದು, ಇದಕ್ಕೂ ಮುನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ಪಡೆದಿದ್ದರು.
ಕಳೆದ ವರ್ಷ 2022ರ ಮಾರ್ಚ್ ನಲ್ಲಿ ಸಿಎಂ ಬೊಮ್ಮಾಯಿ ಅವರು 2,61,977 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿಯ ಬಜೆಟ್ ಗಾತ್ರ 3 ಲಕ್ಷ ಕೋಟಿ ರೂಪಾಯಿ ತಲುಪುವ ಸಾಧ್ಯತೆ ಇದೆ.
ಬೆಳಗ್ಗೆ 10.15ಕ್ಕೆ ಸಿಎಂ ಬೊಮ್ಮಾಯಿ ಅವರು ಬಜೆಟ್ ಮಂಡನೆ ಆರಂಭಿಸಿದ್ದು, ಬಜೆಟ್ ನ ಪ್ರಮುಖ ಮುಖ್ಯಾಂಶಗಳು.
ವಿಧಾನಸೌಧದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯ. ಇದು ಜನಸ್ನೇಹಿ ಬಜೆಟ್ ಎಂದು ಬಣ್ಣಿಸಿದ ಸಿಎಂ ಬೊಮ್ಮಾಯಿ.
ಸಿಎಂ ಕಚೇರಿಯಿಂದ ವಿಧಾನಸಭೆಗೆ ಆಗಮಿಸಿದ ಬೊಮ್ಮಾಯಿ. ವಿಧಾನಸೌಧಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ.
2ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ. ಈ ಬಜೆಟ್ ಉತ್ತಮ ಬದುಕಿನ ಭರವಸೆ. ಈ ಬಜೆಟ್ ಮುಂದಿನ 25 ವರ್ಷದ ದೂರದೃಷ್ಟಿ ಹೊಂದಿದೆ.
ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿದ್ದ ಸಿದ್ದರಾಮಯ್ಯನವರು ಗಮನಿಸಿದ ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್ ಜನರ ಕಿವಿ ಮೇಲೆ ಹೂ ಇಟ್ಟಿದೆ ಎಂದು ಟಾಂಗ್ ನೀಡಿದರು. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ನೀವು ಇಡೀ ಕರ್ನಾಟಕದ 7 ಕೋಟಿ ಜನರ ಕಿವಿ ಮೇಲೆ ಹೂ ಇಡಲು ಹೊರಟಿದ್ದೀರಿ. ಎಂದಾಗ ಸದನದಲ್ಲಿ ಆಡಳಿತಾರೂಢ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ. ಕೋಲಾಹಲ ನಡೆಯಿತು. ಏತನ್ಮಧ್ಯೆ ಸ್ಪೀಕರ್ ಬಜೆಟ್ ಮಂಡನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು.
ಬಜೆಟ್ ನಲ್ಲಿ ರೈತರಿಗೆ ಭರಪೂರ ಕೊಡುಗೆ:
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿ ಸಾಲ ನೀಡಲಾಗುವುದು ಎಂದು ಘೋಷಿಸಲಾಗಿದೆ. 3 ಲಕ್ಷ ಸಾಲದಿಂದ 5 ಲಕ್ಷದವರೆಗೆ ವಿಸ್ತರಣೆ. ಒಟ್ಟು 25 ಸಾವಿರ ಕೋಟಿ ರೂ. ಸಾಲ ವಿತರಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ. ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂಪಾಯಿ ಘೋಷಿಸಲಾಗಿದೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ.
ಸಿರಿಧಾನ್ಯಕ್ಕೆ ನೆರವು:
ಸಿರಿಧಾನ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಅವರು ಕಿರು ಧಾನ್ಯಗಳ ಉತ್ಪಾದನೆ ಮತ್ತು ಉತ್ಪಾದನೆ ಹೆಚ್ಚಿಸಲು ರೈತ ಸಿರಿ ಯೋಜನೆಯಡಿ ಕಿರು ಧಾನ್ಯ ಬೆಳೆಗಾರರಿಗೆ 10,000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.