ಉದನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಆಂಟೋನಿಸ್ ಪ್ರೌಢ ಶಾಲೆ ಮತ್ತು ಬಿಷಪ್ ಪೋಲಿಕಾರ್ಪಸ್ ಪಬ್ಲಿಕ್ ಸ್ಕೂಲ್ ಉದನೆ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ನಡೆಯಿತು.
ಸೈಂಟ್ ಆಂಟೋನಿಸ್ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶ್ರೀಧರ್ ಗೌಡ.ಬಿ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ವೇದಿಕೆಯ ತಾಲೂಕಿನ ಮಾಜಿ ಅಧ್ಯಕ್ಷರಾದ ಗಣೇಶ್ ಕೈಕುರೆ ಇವರು ದುಷ್ಟಗಳಿಂದಾಗುವ ಪರಿಣಾಮಗಳ ಬಗ್ಗೆ ಬಹಳ ಉತ್ತಮವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರುಗಳಾದ ಸಿಬಿಚ್ಚನ್, ನೆಲ್ಯಾಡಿ ವಲಯದ ಜನಜಾಗೃತಿ ವೇದಿಕೆಯ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವಲಯದ ಒಕ್ಕೂಟಗಳ ಅಧ್ಯಕ್ಷರಾದ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಶಿರಾಡಿ ಒಕ್ಕೂಟದ ಸೇವಾಪ್ರತಿನಿಧಿ ಸುಮಿತ್ರಾ ಶ್ರೀಧರ್ ನಿರೂಪಿಸಿ,ವಂದಿಸಿದರು.
ಪುತ್ತಿಗೆ ಒಕ್ಕೂಟದ ಸೇವಾಪ್ರತಿನಿಧಿ ವಿಧ್ಯಾಲಕ್ಷ್ಮಿ, ಶಾಲೆಯ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.