ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಪುತ್ತೂರು: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಪಂಚಾಯತ್ ಮೈಸೂರು ಇದರ ಆಶ್ರಯದಲ್ಲಿ ಫೆಬ್ರವರಿ 19 ರಿಂದ 22 ರ ವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕೃತಿ ಕೆ 8ನೇ ತರಗತಿ(ಬನ್ನೂರು ಕೊರಗಪ್ಪ ಗೌಡ ಮತ್ತು ವನಿತಾ ಎ) ಮತ್ತು ಡಿಂಪಲ್ ಶೆಟ್ಟಿ 8ನೇ ತರಗತಿ (ಮೇರ್ಲ ಉದಯ ಶೆಟ್ಟಿ ಮತ್ತು ಸುನೀತ ಶೆಟ್ಟಿ) 4 X 100ಮೀ ರಿಲೇ ಸ್ಫರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

error: Content is protected !!