ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿದ್ದಾರೆ.
ಇಲ್ಲಿನ ಹಳೆ ಬಸ್ ನಿಲ್ದಾಣದ ಸಮೀಪದ ಮೊಬೈಲ್ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದೆ ಅನ್ನುವ ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್‌ಗೆ ಬಳಸಲಾಗುವ ಅಮಲು ಪದಾರ್ಥ, ಸ್ಮೋಕ್ ಮಾಡಲು ಬೇಕಾದ ಟ್ಯೂಬ್‌ಗಳನ್ನು ವಶಕ್ಕೆ ತೆಗೆದುಕೊಂಡಿದೆ. ಇ-ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಪೊಲೀಸ್ ತನಿಖೆ ಪ್ರಗತಿಯಲ್ಲಿದೆ.