ಲೋಕಾಯುಕ್ತ ಖೆಡ್ಡಾಗೆ ಬಿದ್ದ ಬಿಜೆಪಿ ಶಾಸಕನ ಪುತ್ರ: 40 ಲಕ್ಷ ರೂ. ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ

ಶೇರ್ ಮಾಡಿ

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಅವರ ಮೇಲಿನ ಲೋಕಾಯುಕ್ತ ದಾಳಿಗೆ ಮತ್ತಷ್ಟು ತಿರುವು ಸಿಕ್ಕಿದೆ. ಮಾಡಾಳ್ ಪ್ರಶಾಂತ್ ಮನೆಯಲ್ಲಿ ಆರು ಕೋಟಿ ರೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆ ಮೇಲೆ ಲೋಕಾಯುಕ್ತದ ಭ್ರಷ್ಟಾಚಾರ ನಿಗ್ರಹ ದಳ ಗುರುವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ. ತಡರಾತ್ರಿಯವರೆಗೂ ಹುಡುಕಾಟ ನಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದಾರೆ. ಅವರ ಮಗ ಪ್ರಶಾಂತ್ ಮಾಡಾಳ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (ಬಿಡಬ್ಲ್ಯೂಎಸ್ಎಸ್ ಬಿ) ಮುಖ್ಯ ಅಕೌಂಟೆಂಟ್ ಆಗಿದ್ದಾರೆ.
ಗುತ್ತಿಗೆದಾರ ಬಳಿ 80 ಲಕ್ಷ ರೂ.ಗೂ ಹೆಚ್ಚು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಮುಂಗಡವಾಗಿ 40 ಲಕ್ಷ ರೂ. ಹಣ ಪಡೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದಿದ್ದಾರೆ.

See also  ಮಹಿಳೆ ಅಸಹಜ ಸಾವು: ಪತಿಯೇ ಕೊಲೆಗಡುಕ ಸಾಬೀತು

Leave a Reply

Your email address will not be published. Required fields are marked *

error: Content is protected !!