ಭ್ರಷ್ಟ ಗ್ರಾಮಕರಣಿಕನಿಗೆ 4 ವರ್ಷ ಜೈಲು

ಶೇರ್ ಮಾಡಿ

ಮಂಗಳೂರು: ಲಂಚದ ಹಣ ಸ್ವೀಕರಿಸಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಎಸ್‌.ಮಹೇಶ್‌ ಶಿಕ್ಷೆಗೊಳಗಾದವ. ಈತ ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ. 2016ರ ಜೂ. 7ರಂದು 45,000 ರೂ.ಗಳನ್ನು ಲಂಚದ ಹಣವಾಗಿ ಸ್ವೀಕರಿಸುವ ಸಂದರ್ಭ ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದರು.
ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಮಾ. 2ರಂದು ಅಪರಾಧಿ ಎಸ್‌. ಮಹೇಶ್‌ನಿಗೆ 4 ವರ್ಷಗಳ ಜೈಲು ಹಾಗೂ 70,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಕಟ್ಟಲು ವಿಫ‌ಲನಾದರೆ ಮತ್ತೆ 8 ತಿಂಗಳ ಜೈಲು ಶಿಕ್ಷೆಗೆ ಆದೇಶಿಸಿದ್ದಾರೆ. ಸರಕಾರದ ಪರ ಕರ್ನಾಟಕ ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಅವರು ವಾದಿಸಿದ್ದರು.

Leave a Reply

error: Content is protected !!