ಕಟಪಾಡಿ: ರಾಷ್ಟೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಮರಿಗೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ ರವಿವಾರ ಸಂಜೆ ನಡೆದಿದೆ.
ಕೇರಳ ನೋಂದಣಿ ಹೊಂದಿರುವ ಕಾರಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಈ ಪೈಕಿ ಮಕ್ಕಳು ಮತ್ತು ಮಹಿಳೆಯರು ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರು ಗಾಯಳುಗಳನ್ನು ಆಸ್ಪತ್ರೆಗೆ ಕರೆದೋಯ್ಯುವಲ್ಲಿ ಸಹಕರಿಸಿದ್ದಾರೆ.