




ಪಾಣೆಮಂಗಳೂರು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿಯಲ್ಲಿ ಭಾನುವಾರ ಸಂಜೆ ಆಕಸ್ಮಿಕವಾಗಿ ರೆಫ್ರಿಜರೇಟರ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಅಪಾರ ನಷ್ಟ ಸಂಭವಿಸಿದೆ.

ಬಿ ಸಿ ರೋಡು ಸಮೀಪದ ಪರ್ಲಯಾ ನಿವಾಸಿ ಫರೂಕ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಅವಘಡ ಸಂಭವಿಸಿದ್ದು. ವಿಷಯ ತಿಳಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.