ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು “523ನೇ ನಮ್ಮೂರು ನಮ್ಮ ಕೆರೆ” ಕೆರೆ ಹೂಳೆತ್ತುವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಾಜೀವಿಯವರು ವಹಿಸಿದ್ದರು ಹಾಗೂ ಉದ್ಘಾಟನೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆ ಗಳ ಸಂಚಾಲಕರಾದ ಸೀತಾರಾಮ್ ರೈ ರವರು ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆ ಇದರ ನಿರ್ದೇಶಕರು ಕೆರೆ ಕಾಮಗಾರಿಯ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು. ಕೆರೆ ಸಮಿತಿಯ ಅಧ್ಯಕ್ಷರಾದ ಗಿರಿಶಂಕರ ಸುಲಾಯರವರು ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶೀನಪ್ಪ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ. ಕೆರೆ ಸಮಿತಿ ಕೋಶಾಧಿಕಾರಿ ಮಹೇಶ್ ಸವನೂರು, ಉಪಾಧ್ಯಕ್ಷರಾದ ನಾರಾಯಣ ಗೌಡ ಪೂವ, ಕೆರೆ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಗ್ರಾಮ ಪಂಚಾಯಿತಿನ ಸದಸ್ಯರು, ಒಕ್ಕೂಟದ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದರು.
ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಎನ್ ಸ್ವಾಗತಿಸಿದರು, ಜ್ಞಾನ ವಿಕಾಸ ಸಮನ್ವಯಧಿಕಾರಿ ಚೇತನ ಕಾರ್ಯಕ್ರಮ ನಿರೂಪಿಸಿದರು, ಮನ್ಮಥ ರವರು ಧನ್ಯವಾದ ನೀಡಿದರು. ಇಂಜಿನಿಯರ್ ಭರತ್, ವಲಯ ಮೇಲ್ವಿಚಾರಕರಾದ ಹರ್ಷ ಕುಮಾರಿ, ಕೃಷಿ ಮೇಲ್ವಿಚಾರಕಿ ರಮ್ಯಾ ಹಾಗೂ ಸೇವಾಪ್ರತಿನಿಧಿಗಳು ಸಹಕರಿದರು.