ಪಿಕಪ್ – ಓಮ್ನಿ ಡಿಕ್ಕಿ: ಓಮ್ನಿ ಚಾಲಕ ಮೃತ್ಯು

ಶೇರ್ ಮಾಡಿ

ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಒಮ್ನಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ ಮಾಡಿ ಬಿ ಸಿ ರೋಡು ಕಡೆಗೆ ಕ್ರಾಸ್ ಮಾಡುವ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಬ್ರಹ್ಮರಕೋಟ್ಲು ನಿವಾಸಿ ರಾಜೇಶ್ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಎರಡು ಕಾಲಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಈತನನ್ನು ಮಂಗಳೂರು ಖಾಸಗಿ‌ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಗೆ ಸ್ಪಂದಿದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜೇಶ್ ಶೆಟ್ಟಿ ಅವರ ಮನೆಯ ಸಾಕುಬೆಕ್ಕಿಗೆ ಹುಷಾರಿಲ್ಲದ ಕಾರಣ ಬೆಕ್ಕನ್ನು ವೈದ್ಯರ ಬಳಿ ಪರೀಕ್ಷೆ ನಡೆಸಿ, ಔಷಧಿಯ ಜೊತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ತಲಪಾಡಿ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬೆಕ್ಕು ಸ್ಥಳದಲ್ಲಿಯೇ ಮೃತಪಟ್ಟಿತ್ತು.

Leave a Reply

error: Content is protected !!