ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದುಬಿದ್ದು ಮೃತ್ಯು

ಶೇರ್ ಮಾಡಿ

ಬೆಳ್ತಂಗಡಿ: ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿರುವುದು ವರದಿಯಾಗಿದೆ.

ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾರ್ವತಿ(55) ಮೃತಪಟ್ಟವರು. ಇವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಗಣೇಶ ಎಂಬವರ ಮನೆಗೆ ಮಂಗಳವಾರ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಮಯ ಸಂಜೆ ಒಮ್ಮೆಲೇ ಕುಸಿದು ಬಿದ್ದು, ಪ್ರಜ್ಞೆ ಕಳೆದುಕೊಂಡರೆನ್ನಲಾಗಿದೆ. ಆರೈಕೆ ಮಾಡಿ ಕೂಡಲೇ ಚಿಕಿತ್ಸೆಗಾಗಿ ಕಕ್ಕಿಂಜೆ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಮೃತರ ಪುತ್ರಿ ಪುಷ್ಪಾ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Reply

error: Content is protected !!