ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಂಜಾರು, ಪಡುಪೆರಾರು ದ್ವಾರ, ಪೊಳಲಿ ದ್ವಾರ, ಅಡ್ಡೂರು ಸಮೀಪದ ನೂಯಿ ತಲಾ ಒಂದೊಂದು ಹಾಗೂ ಬಡಗ ಎಡಪದವಿನಲ್ಲಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಳಿಕ ಮರಳು ಸಮೇತ ಲಾರಿಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಿದ್ದಾರೆ.