ದಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ

ಶೇರ್ ಮಾಡಿ

ಉಜಿರೆಯಲ್ಲಿ ಫೆ. 3ರಿಂದ 5ರ ತನಕ ಜರಗಿದ ದಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಉಜಿರೆಯ ರಾಮಕೃಷ್ಣ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆ ವಹಿಸಿದ್ದ ಸಮ್ಮೇಳನದ ಸಂಯೋಜನಾ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ,ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಉಪಸ್ಥಿತರಿದ್ದರು.
ಕಸಾಪ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ ಸ್ವಾಗತಿಸಿದರು. ಸಮ್ಮೇಳನದ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಕಾರ್ಯಕ್ರಮ ನಿರೂಪಿಸಿದರು.ಕಾರ್ಯಾಲಯ ಮುಖ್ಯಸ್ಥ ಹರ್ಷ ಕುಮಾರ್ ಲೆಕ್ಕ ಪತ್ರ ಮಂಡಿಸಿದರು. ಸಾಂಸ್ಕೃತಿಕ ಸಮಿತಿ ಪರವಾಗಿ ವಿದ್ಯಾಶ್ರೀ ಅಡೂರು, ಕಾರ್ಯಕ್ರಮ ಸಂಯೋಜನೆ ಸಮಿತಿಯ ಸಂಚಾಲಕ ಡಾ.ಬಿ.ಎ.ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.

ಇತ್ತೀಚೆಗೆ ಅಗಲಿದ ಉಜಿರೆ ಜನಾರ್ದನ ದೇವಸ್ಥಾನದ ವಿಜಯ ರಾಘವ ಪಡುವೆಟ್ನಾಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

See also  ವಯೋಸಹಜ ಅನಾರೋಗ್ಯದ ನಡುವೆ ಮತ ಚಲಾಯಿಸಿದ ಶಿಶಿಲದ ನೊಣಮ್ಮ

Leave a Reply

Your email address will not be published. Required fields are marked *

error: Content is protected !!