ಇಂದಿನಿಂದ ಅಂದರೆ 20-03-2023 ರಿಂದ, 2023-24ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿಯ (RTE Admission 2023-24) ಮೂಲಕ ಉಚಿತವಾಗಿ ಪ್ರವೇಶಕ್ಕೆ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿಂದೆ ದಾಖಲಾತಿ ಪ್ರಕ್ರಿಯೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ವೇಳಾಪಟ್ಟಿಯನ್ಜು ಬಿಡುಗಡೆ ಮಾಡಿತ್ತು. ಈ ವೇಳಾಪಟ್ಟಿಯ ಪ್ರಕಾರ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ದಿನಾಂಕ 20-03-2023 ರಿಂದ 20-04-2023ರ ವರೆಗೆ ಆನ್‌ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಅವಕಾಶ ನೀಡಲಾಗಿದೆ.
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಕರ್ನಾಟಕ ರಾಜ್ಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳು ಎಲ್ಲಿ ಇರುವುದಿಲ್ಲವೋ ಅಥವಾ ವಿದ್ಯಾರ್ಥಿಗಳ ಪ್ರದೇಶದಲ್ಲಿ ಇರುವ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಮೂಲಕ ಉಚಿತವಾಗಿ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ವಿಧಾನ
RTE ಮೂಲಕ ಪ್ರವೇಶಕ್ಕೆ ಅರ್ಜಿ ಹಾಕಲು ಪಾಲಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಉಚಿತವಾಗಿ ಅಥವಾ ಸರ್ಕಾರದ ಪಾವತಿ ಕೇಂದ್ರಗಳಾದ ಬೆಂಗಳೂರು ನಗರದಲ್ಲಿ, ಬೆಂಗಳೂರು-ಒನ್, ಇತರೆ ನಗರ ಪ್ರದೇಶಗಳಳ್ಲಿ ಕರ್ನಾಟಕ-ಒನ್, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಟಲ್-ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಹಾಕಲು ಬೇಕಾದ ದಾಖಲೆಗಳು
ಶಿಕ್ಷಣ ಹಕ್ಕು ಕಾಯಿದೆಯಡಿ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗಾಗಿ ಪ್ರವೇಶ ಕೋರುವ ಮಗು ಮತ್ತು ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ ಅಗತ್ಯವಾಗಿ ಬೇಕು.
ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳು
ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯಿಂದ ನೈಜತೆ ತಾಳೆ ಆಗದ ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳ ತಂದೆ/ತಾಯಿ ಪೋಷಕರ ಮೊಬೈಲಿಗೆ ದೋಷಗಳನ್ನು ಸರಿಪಡಿಸಲು ಎಸ್‌ಎಂಎಸ್ ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್
https://www.schooleducation.kar.nic.in ಗೆ ಭೇಟಿ ನೀಡಿ.