ಮೇ 10ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ, ಮೇ 13ಕ್ಕೆ ಫಲಿತಾಂಶ; ನೀತಿ ಸಂಹಿತೆ ಜಾರಿ

ಶೇರ್ ಮಾಡಿ

ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿರುವ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಬುಧವಾರ (ಮಾರ್ಚ್ 29) ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.

ಸುದ್ದಿಗೋಷ್ಠಿಯಲ್ಲಿ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10ರಂದು ಮತದಾನ , ಮೇ 13ರಂದು ಮತ ಎಣಿಕೆ ನಡೆಯಲಿದೆ.
ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಏ.21 ನಾಮಪತ್ರ ಪರಿಶೀಲನೆಗೆ ಕೊನೆ ದಿನ. ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ.

ಕರ್ನಾಟಕದಲ್ಲಿ ಈ ಬಾರಿ ಒಟ್ಟು 5.22 ಕೋಟಿ ಮತದಾರರಿದ್ದಾರೆ. ಇದರಲ್ಲಿ 2 ಕೋಟಿ 59 ಲಕ್ಷ ಮಹಿಳಾ ಮತದಾರರು, 2 ಕೋಟಿ 62 ಲಕ್ಷ ಪುರುಷ ಮತದಾರರಿದ್ದಾರೆ. ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆ ಸ್ಥಾಪಿಸಲಾಗುವುದು. ನಗರಪ್ರದೇಶದಲ್ಲಿ 24,063 ಮತಗಟ್ಟೆ ಸ್ಥಾಪನೆ, ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!