ಸುಳ್ಯ: ದುರಂತ ಸಂಭವಿಸಿದ ಸ್ಥಳಕ್ಕೆ ಡಿವೈಎಸ್ಪಿ ಭೇಟಿ

ಶೇರ್ ಮಾಡಿ

ಸುಳ್ಯ: ಇಲ್ಲಿನ ಗುರುಂಪು ಎಂಬಲ್ಲಿ ಬರೆ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಪುತ್ತೂರು ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಡಾ|ವೀರಯ್ಯ ಹಿರೇಮಠ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮುಂಬರುವ ಚುನಾವಣ ಪೂರ್ವ ಸಿದ್ಧತೆಯ ಅಂಗವಾಗಿ ಸುಳ್ಯದ ಗಡಿ ಪ್ರದೇಶದ ಚೆಕ್‌ ಪೋಸ್ಟ್ ಗಳಿಗೆ ಹಾಗೂ ಚುನಾವಣ ಸಂದರ್ಭದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ಬರಲಿರುವ ಅರೆ ಸೇನಾ ತುಕಡಿ ಸಿಬಂದಿ ತಂಗಲಿರುವ ಕಾಂತಮಂಗಲ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್‌ ವೃತ್ತ ನಿರೀಕ್ಷಕ ರವೀಂದ್ರ ಸಿ.ಎಂ., ಪೊಲೀಸ್‌ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!