ನೆಲ್ಯಾಡಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿ ತಾಯಿ ಮೃತ್ಯು – ತಂದೆ, ಮಗ ಗಂಭೀರ

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು ಚಲಾಯಿಸಿದ ಮಗ ಅಶ್ವಿನ್ ಹಾಗೂ ತಂದೆ ಗಂಭೀರ ಗಾಯಗೊಂಡು ಇಬ್ಬರನ್ನು ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್ ನಲ್ಲಿ ಮಂಗಳೂರು ಆಸ್ಪತ್ರೆಗೆ ಕರೆದೂಯ್ಯಲಾಗಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಸಬ್ ಇನ್ಸ್ಪೆಕ್ಟರ್ ರಾಜೇಶ್ ಕೆ ವಿ, ನೆಲ್ಯಾಡಿ ಹೊರ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಬಾಲಕೃಷ್ಣ, ಕುಶಾಲಪ್ಪ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.

Leave a Reply

error: Content is protected !!