ಹಸಿ ಮೀನಿನ ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ

ಶೇರ್ ಮಾಡಿ

ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ ಎಂಬಲ್ಲಿ ವ್ಯಕ್ತಿ ಓರ್ವ ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಪೆರ್ಲ ನಿವಾಸಿ ನೋಣಯ್ಯ ಗೌಡ(ವ.55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.
ಈತ ಅಂಗವೈಫಲ್ಯ ಹೊಂದಿದ ವ್ಯಕ್ತಿಯಾಗಿದ್ದು, ಕಳೆದ ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದರು.
ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ರನ್ನು ಅಗಲಿದ್ದಾರೆ.

Leave a Reply

error: Content is protected !!