ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಡಿಪಾರ್ಟ್‌ಮೆಂಟ್‌ನ ಲೆಕ್ಕ ಸಹಾಯಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ನೇಮಕಾತಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿ.
ನೇಮಕ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಯ ಇಲಾಖೆ ಹೆಸರು : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ
ಹುದ್ದೆಯ ಹೆಸರು : ಲೆಕ್ಕ ಸಹಾಯಕರು
ಹುದ್ದೆಗಳ ಸಂಖ್ಯೆ : 242 (ಉಳಿಕೆ ಮೂಲ ವೃಂದ)
ವೇತನ ಶ್ರೇಣಿ : ರೂ.27,650-52,650.
ನೇಮಕಾತಿ ವಿಧಾನ : ಗ್ರೂಪ್ ಸಿ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ.
ವಿದ್ಯಾರ್ಹತೆ
ಬಿಕಾಂ / ಬಿಬಿಎಂ / ಬಿಬಿಎ ಡಿಗ್ರಿಯನ್ನು ಕಡ್ಡಾಯ ಪಾಸ್ ಮಾಡಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು ನಿಗಧಿತ ವಯಸ್ಸು
- ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
- ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 23-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 24-04-2023
ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಅರ್ಜಿ ಶುಲ್ಕ ಮಾಹಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್ ರೂ.35 ಪಾವತಿಸಬೇಕು.
ವೆಬ್‌ಸೈಟ್ ವಿಳಾಸ https://www.kpsc.kar.nic.in/index.html