ಪುಂಜಾಲಕಟ್ಟೆ: ಯುವಕನೋರ್ವ ಶಂಕಿತ ರೇಬಿಸ್‌ಗೆ ಬಲಿ

ಶೇರ್ ಮಾಡಿ

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಸೋಮವಾರ ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಅಶೋಕ ಹೆಗ್ಡೆ ಅವರ ಪುತ್ರ ಪ್ರಶಾಂತ ಹೆಗ್ಡೆ(31)ಅವರು ಮೃತ ಪಟ್ಟ ದುರ್ದೈವಿಯಾಗಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ನಾಯಿಮರಿ ಕಡಿದಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಡಿದಿರುವುಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ಚಿಕಿತ್ಸೆಗಾಗಿ ತೆರಳಿದ್ದಾರೆ. ಜ್ವರ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ.

ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಅವರು ತಿಳಿಸಿದ್ದಾರೆ.

ಪ್ರಶಾಂತ್ ಅವರು ಇಬ್ಬರು ಪುತ್ರರಲ್ಲಿ ಹಿರಿಯವರಾಗಿದ್ದು, ಅವಿವಾಹಿತರಾಗಿದ್ದರು. ಜಿಯೋ ಸಂಸ್ಥೆಯಲ್ಲಿ ಒಪ್ಪಂದದ ಮೇರೆಗೆ ಉದ್ಯೋಗಿಯಾಗಿದ್ದು, ಮನೆಗೆ ಆಧಾರವಾಗಿದ್ದರು. ಅವರು ಪುಂಜಾಲಕಟ್ಟೆ ಶ್ರೀ ರಾಮ ಭಜನಾ ಮಂದಿರದಲ್ಲಿ ಪೂಜಾ ಕಾರ್ಯಗಳಿಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಜೆಪಿ ಪಕ್ಷದ ಪಿಲಾತಬೆಟ್ಟು ಬೂತ್ ಅಧ್ಯಕ್ಷರಾಗಿದ್ದರು. ಸ್ಥಳೀಯವಾಗಿ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಹವ್ಯಾಸಿ ನಾಟಕ ಕಲಾವಿದರಾಗಿದ್ದರು.

See also  ನಿರುದ್ಯೋಗದ ಕಾರಣದಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು

Leave a Reply

Your email address will not be published. Required fields are marked *

error: Content is protected !!