ದ್ವಿಚಕ್ರ ವಾಹನ ಕಳವು ಪ್ರಕರಣ; 4 ಮಂದಿ ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

ಶೇರ್ ಮಾಡಿ

ಮಂಗಳೂರು:ಪೊಲೀಸ್ ಕಮಿಷನರೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ 4 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತರನ್ನು ಕಸಬಾ ಬೆಂಗರೆಯ ಮುಹಮ್ಮದ್ ಸಿನಾನ್ (19), ಮುಹಮ್ಮದ್ ಸಾಹಿಲ್ (22), ಉಳ್ಳಾಲ ತೋಟ ಹೌಸ್‌ನ ಫೈಝಲ್ ಯಾನೆ ತೋಟ ಫೈಝಲ್ (35), ಪಡುಬಿದ್ರೆ ಸಮೀಪದ ಕಂಚಿನಡ್ಕದ ಪ್ರಸ್ತುತ ನಂದಾವರ ನಿವಾಸಿ ಮುಹಮ್ಮದ್ ಸಾಹಿಲ್ (18)‌ ಎಂದು ಗುರುತಿಸಲಾಗಿದೆ.

ಆರೋಪಿಗಳು ಮಾ.3ರಿಂದ 30ರ ಮಧ್ಯೆ ತೊಕ್ಕೊಟ್ಟು ಜಂಕ್ಷನ್, ಕೋಟೆಕಾರ್, ಕಸಬಾ ಬೆಂಗರೆ, ಕದ್ರಿ, ಸೆಂಟ್ರಲ್ ಮಾರ್ಕೆಟ್, ನಂತೂರು ಸಮೀಪದ ತಾರೆತೋಟದಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳು ಮಂಗಳೂರು ನಗರದ ಗೂಡ್ಸ್ ಶೆಡ್ ಪರಿಸರದಲ್ಲಿ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದ್ದು, ಈ ಕುರಿತು ಮಂಗಳೂರು ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಹಾಗೂ ವಶಪಡಿಸಿಕೊಂಡ ವಾಹನಗಳನ್ನು ಮುಂದಿನ ಕ್ರಮಕ್ಕೆ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗ್ಡೆ, ಇನ್ಸ್ ಫೆಕ್ಟರ್ ಶ್ಯಾಮ್ ಸುಂದರ್ ಹೆಚ್. ಎಂ, ಪಿಎಸೈ ಸುದೀಪ್, ಶರಣಪ್ಪ ಭಂಡಾರಿ, ಎಎಸೈ ಮೋಹನ್ ಕೆ.ವಿ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

Leave a Reply

error: Content is protected !!