ಕಿಚ್ಚನಿಗೆ ಅನಾಮಧೇಯ ವ್ಯಕ್ತಿಯಿಂದ “ಖಾಸಗಿ ವಿಡಿಯೋ ಲೀಕ್‌ ಮಾಡುತ್ತೇನೆ” ಬೆದರಿಕೆ ಪತ್ರ : FIR

ಶೇರ್ ಮಾಡಿ

ಬೆಂಗಳೂರು: ನಟ ಸುದೀಪ್‌ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಚರ್ಚೆಯಲ್ಲಿರುವಾಗಲೇ, ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ.

ಕಿಚ್ಚ ಸುದೀಪ್‌ ಬುಧವಾರ ಬಿಜೆಪಿ ಸೇರಿ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆಯೇ ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ.
ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ.

ಈ ಕುರಿತು ಜಾಕ್‌ ಮಂಜು ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತ್ರ ಸಮೇತ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಎಫ್‌ ಐ ಆರ್‌ ದಾಖಲಿಸಿಕೊಂಡು ತನಿಖೆ ಆರಂಭಿದ್ದಾರೆ.

Leave a Reply

error: Content is protected !!