ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಲಕ

ಶೇರ್ ಮಾಡಿ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10ರ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದ ಅಂಗಡಿ ಮಾಲಕ.
ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು.
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ ,ಪತ್ನಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!