ಪುತ್ತೂರು ಅಭ್ಯರ್ಥಿಯಾಗಿ ಕೋಡಿಂಬಾಡಿ ಅಶೋಕ್ ಕುಮಾರ್ : ಘೋಷಣೆಯೊಂದೇ ಬಾಕಿ

ಶೇರ್ ಮಾಡಿ

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ.

ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ.
ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾವು ಹೇಮನಾಥ ಶೆಟ್ಟಿ ಕೂಡಾ ಆಕಾಂಕ್ಷಿಗಳಾಗಿದ್ದರು.
ಅಶೋಕ್ ಕುಮಾರ್ ರೈ ಅವರು ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಟಿಕೆಟ್ ಗೆ ಪ್ರಯತ್ನಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ತೊರೆದು ಕೈ ಪಾಳಯ ಸೇರಿದ್ದರು.

See also  ಅರಿಕೆಗುಡ್ಡೆ: ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ,ನಿಧಿಕುಂಭ ಸ್ಥಾಪನೆ

Leave a Reply

Your email address will not be published. Required fields are marked *

error: Content is protected !!