ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ

ಶೇರ್ ಮಾಡಿ

ಶಿವಮೊಗ್ಗ: ಮಾಜಿ ಸಚಿವ, ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಕೆಎಸ್ ಈಶ್ವರಪ್ಪ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ನಾನು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸುತ್ತಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೂ ಪರಿಗಣಿಸಬಾರದಾಗಿ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷ ಹಿರಿಯರಿಗೆ ಧನ್ಯವಾದಗಳು ಎಂದಿದ್ದಾರೆ.
ಅವರ ದಿಢೀರ್ ಈ ನಿರ್ಧಾರ ಘೋಷಿಸಿರುವುದು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

Leave a Reply

error: Content is protected !!