ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಶೇರ್ ಮಾಡಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ವೇಳೆ ಭೇಟಿ ನೀಡಿದರು.

ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರುಶನ ಪಡೆದರು. ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮುಖ್ಯ ಮಂತ್ರಿಗಳನ್ನು ದೇವಳದ ವತಿಯಿಂದ ಸ್ವಾಗತಿಸಿ, ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‍ರಾಂ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್ ಕುಮಾರ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಸುಳ್ಯ ತಾ.ಪಂ. ಇ ಒ ಭವಾನಿಶಂಕರ್, ಕಡಬ ತಾ.ಪಂ. ಇಒ ನವೀನ್ ಕುಮಾರ್, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ರವೀಂದ್ರ, ಸುಳ್ಯ ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ವೆಂಕಟ್ ದಂಬೆಕೋಡಿ, ಸುಬೋದ್ ಶೆಟ್ಟಿ, ಶ್ರೀಕುಮಾರ್ ಬಿಲಧ್ವಾರ, ಶಿಷ್ಠಚಾರ ವಿಭಾಗದ ಜಯರಾಮ ರಾವ್, ಗೋಪಿನಾಥ, ನವೀನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರಾವಳಿಯ ದೇವಸ್ಥಾನಕ್ಕೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಕಟೀಲು, ಧರ್ಮಸ್ಥಳ, ಕೊಲ್ಲೂರಿಗೆ ಭೇಟಿ ನೀಡುತ್ತಿರುತ್ತೇನೆ. ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದೇನೆ. ಇದೀಗ ಚನಾವಣೆ ಬಂದಿದೆ ಆ ಹಿನ್ನಲೆಯಲ್ಲೂ ಭೇಟಿ ನೀಡಿ, ರಾಜ್ಯದ ಜನರ ಸುಭೀಕ್ಷೆಗೆ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮಂಗಳೂರಿನತ್ತ ತೆರಳಿದರು. ಧರ್ಮಸ್ಥಳದಿಂದ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ಕಾರಿನಲ್ಲಿ ಕುಕ್ಕೆಗೆ ಬಂದು, ದೇವರ ದರುಶನ ಪಡೆದು ಹಿಂದಿರುಗುವ ವೇಳೆ ಕಾರಿನಲ್ಲಿ ಬಿಳಿನೆಲೆಗೆ ತೆರಳಿ ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಮಂಗಳೂರಿನತ್ತ ಪ್ರಯಾಣ ಬೆಳೆಸಿದರು. ಸಿಎಂ ಭೇಟಿ ಹಿನ್ನಲೆಯಲ್ಲಿ ಬಿಳಿನೆಲೆಯಿಂದ ಕುಕ್ಕೆ ಸುಬ್ರಹ್ಮಣ್ಯ ವರೆಗೆ ಹೆಚ್ಚುವರಿ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಸಿಎಂ ಬೊಮ್ಮಾಯಿ ಕ್ಷೇತ್ರಕ್ಕೆ ಆಗಮಿಸುವ ಮೊದಲು ಮಳೆ ಆರಂಭಗೊಂಡಿದ್ದು, ಮುಖ್ಯಮಂತ್ರಿಗಳು ದೇವರ ದರುಶನ ಪಡೆದು ತೆರಳುವ ವೇಳೆಗೆ ಮಳೆ ವಿರಾಮ ನೀಡಿತ್ತು.

See also  ನೆಲ್ಯಾಡಿ: ಪರಿಶಿಷ್ಟ ಜಾತಿ/ ಪಂಗಡದವರ 25% ನಿಧಿಯಿಂದ 30 ಕುಟುಂಬಗಳಿಗೆ ಡಿನ್ನರ್ ಸೆಟ್ ವಿತರಣೆ

Leave a Reply

Your email address will not be published. Required fields are marked *

error: Content is protected !!