



ಸುಳ್ಯ: ಸಂಪಾಜೆಯಲ್ಲಿ ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಎ.14ರ ಶುಕ್ರವಾರ ನಡೆದಿದೆ.

ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಮೂರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ಮಗು ಹಾಗೂ ಒಬ್ಬ ಪುರುಷ ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಮಂಡ್ಯ ಮೂಲದ ಕಾರು ಇದು ಎನ್ನಲಾಗಿದ್ದು, ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಮೃತದೇಹಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.