ಜೆಡಿಎಸ್ ಗೆ ಮೊಯ್ದಿನ್ ಬಾವ: ಮಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ

ಶೇರ್ ಮಾಡಿ

ಮಂಗಳೂರು: ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ‌ ಮೊಯ್ದಿನ್ ಬಾವ

ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ ಪೈಪೋಟಿ‌ ಇತ್ತು. ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದ್ದು, ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.

ಟಿಕೆಟ್ ಕೈ ತಪ್ಪಿದ ಬಳಿಕ ವಿಡಿಯೋ ಸಂದೇಶ ಕಳುಹಿಸಿದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ನನ್ನನ್ನು ಕಾಂಗ್ರೆಸ್ ಪಕ್ಷ‌ ಉಪಯೋಗಿಸಿ ಹಣದ ಆಸೆಗಾಗಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ನನ್ನ ಹೆಸರಿಗಾಗಿದ್ದ ಬಿ ಫಾರಂ ಅನ್ನು ಎರಡು ಬಾರಿ ತಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!