ನೆಲ್ಯಾಡಿ: 2022-23 ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 100 ವಿದ್ಯಾರ್ಥಿಗಳಲ್ಲಿ 96 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.96 ಫಲಿತಾಂಶ ಲಭಿಸಿದೆ.
ಒಟ್ಟು 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಕಲಾ ವಿಭಾಗದಲ್ಲಿ ಶ್ರೇಯಾ ಎಂ.ಇ(549), ಜಿತಿನ್ (517), ಆಯಿಷಾ ರಿನಾಝ(513) ಹಾಗೂ ವಾಣಿಜ್ಯ ವಿಭಾಗದಲ್ಲಿ ಮಾನ್ಯ ಎಂ (582), ನಿಶಾ ಸಿ.ಜೆ (580), ಶೇಕ್ ಮಹಮ್ಮದ್ ಆಯಾನ್(568), ವಿಜೇತ್ ಎಸ್ (554), ಕೀರ್ತನಾ(546), ಚೈತನ್ಯ ಎಚ್(539), ಪ್ರಣಮ್ ಎಮ್(536), ಸೃಷ್ಟಿ(534), ಪೂಜಾ (532), ಮಹಮ್ಮದ್ ಸುಹೈರ್(531), ಪ್ರಣೀತ್(529), ವರ್ಷಿತಾ ಪಿ.ಜೆ(529), ರಶ್ಮಿತಾ(515), ಯಶಸ್ವಿ ಟಿ.ಎಸ್(511), ಉಮೇಶ್ ನಾಯ್ಕ್(512) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉಳಿದಂತೆ ಕಲಾವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ 27 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು, ತೃತೀಯ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು ಹಾಗೂ ಕಲಾವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು, ತೃತೀಯ ಶ್ರೇಣಿಯಲ್ಲಿ 1 ವಿದ್ಯಾರ್ಥಿ ಉತ್ತೀರ್ಣರಾಗಿದ್ದಾರೆ.