ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.94 ಫಲಿತಾಂಶ; ಅರ್ಥಶಾಸ್ತ್ರದಲ್ಲಿ ಆಯಿಷಾಳಿಗೆ 99 ಅಂಕ

ಶೇರ್ ಮಾಡಿ

ಕೊಕ್ಕಡ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ಕಡ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಿಜ್ಞಾನ , ವಿಭಾಗದಲ್ಲಿ ಒಟ್ಟು 57 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 78.94 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗ:
24 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಿಜ್ಞಾನ ವಿಭಾಗದಲ್ಲಿ ಒಟ್ಟು ಶೇ.83.33 ಫಲಿತಾಂಶ ಪಡೆದಿದೆ
ಕಲಾ ವಿಭಾಗ:
33 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 1 ವಿದ್ಯಾರ್ಥಿ ವಿಶಿಷ್ಟ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಕಲಾ ವಿಭಾಗದಲ್ಲಿ ಒಟ್ಟು ಶೇ.76 ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ತೃಷಾ ಡಿ.ಎನ್.(523), ರೋಹನ್(515), ಅಕ್ಷತಾ (504), ಕಲಾ ವಿಭಾಗದಲ್ಲಿ ಆಯಿಷಾ(537), ವರ್ಷಿಣಿ(507), ರಾಜೇಶ್ (499) ಅತೀ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

Leave a Reply

error: Content is protected !!