ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಶೇರ್ ಮಾಡಿ

ಮಂಗಳೂರು: ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಪವಿತ್ರ ರಮಝಾನ್‌ನ 30 ವೃತಗಳನ್ನು ಅನುಷ್ಠಾನಗೊಳಿಸಿ ‘ಈದುಲ್ ಫಿತ್ರ್’ ಆಚರಿಸಿದರು.

ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು.

ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.

ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು.

Leave a Reply

error: Content is protected !!