ನೆಲ್ಯಾಡಿ: ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮ

ಶೇರ್ ಮಾಡಿ

ನೇಸರಜ.2: ಕಡಬ ತಾಲೂಕು ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನಲ್ಲಿ ದಿನಾಂಕ 31-12-2021 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಿತು.
ಯು.ಎ.ಇ.ಯ ಸಾರ ಅರಬಿಯ ಕಂಪನಿಯ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸುತ್ತಿರುವ.ಪ್ರಿನ್ಸ್ ಚಾಕೋ ಕಾರ್ಯಗಾರವನ್ನು ನಡೆಸಿ ಕೊಟ್ಟರು.ಚಟುವಟಿಕೆಗಳ ಮೂಲಕ ಪರಿಣಾಕಾರಿ ಸಂವನ ಕೌಶಲ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.ತರಬೇತಿ ಕಾರ್ಯಗಾರದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿದ ವಿದ್ಯಾರ್ಥಿಗಳಾದ ಸಚಿನ್ ಇವರಿಗೆ ರೂ ಒಂದು ಸಾವಿರ ಹಾಗೂ ಏಂಜಲಿನ್ ಇವರಿಗೆ ರೂ ಐದು ನೂರು ರೂಪಾಯಿ ನಗದು ಬಹುಮಾನ ನೀಡಿ ಗೌರವಿಸಿದರು. ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿಯಾದ ಇವರು ತನ್ನ ಪುತ್ರಿ ರೂತ್ ಮರಿಯಮ್ ಸ್ಮಾರಕಾರ್ಥ ಸಂತ ಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ತಲಾ 5000 ಮತ್ತು 2500 ರೂಗಳ ಪ್ರೋತ್ಸಾಹಧನವನ್ನು ನೀಡುತ್ತಿದ್ದಾರೆ.

ಕಾಲೇಜಿನ ಪ್ರಾಚಾರ್ಯರಾದ ಏಲಿಯಾಸ್ ಎಂ.ಕೆ ಸ್ವಾಗತಿಸಿದರು.ಇತಿಹಾಸ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಪ್ರಿನ್ಸ್ ಚಾಕೋ ರವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಅಬ್ರಹಾಂ ವರ್ಗೀಸ್ ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಇಂತಹ ತರಬೇತಿಗಳಲ್ಲಿ ಭಾಗವಹಿಸುವುದರ ಮೂಲಕ ಸೌಜನ್ಯಯುತವಾಗಿ ಮತ್ತು ಸಂಸ್ಕಾರ ಭರಿತವಾಗಿ ಮಾತನಾಡುವುದನ್ನು ಕಲಿಯಲು ಸಾಧ್ಯ ಎಂದು ನುಡಿದರು.ವಿದ್ಯಾರ್ಥಿನಿ ಭವಿಷ್ಯ ತರಬೇತಿ ಕಾರ್ಯಕ್ರಮ ಅತ್ಯುತ್ತಮವಾಗಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾವ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಚೇತನ್ ಕುಮಾರ್.ಟಿ.ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

error: Content is protected !!