ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..ಈ ವರ್ಷ ಸಿಗಲಿವೆ 26 ಹೆಚ್ಚಿಗೆ ರಜೆ

ಶೇರ್ ಮಾಡಿ

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ಪ್ರಕಾರ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಟ್ಟು 244 ಶಾಲಾ ದಿನಗಳು ಇರಲಿವೆ.

ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಮಕ್ಕಳ ಶಾಲಾ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಂಡಿವೆ. ಹೀಗಾಗಿ ಈ ವರ್ಷ ಒಟ್ಟು 244 ಶಾಲಾ ದಿನಗಳು ಇರಲಿದ್ದು, ಇದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ನಡೆಯಲಿವೆ. ಕಳೆದ ವರ್ಷದಲ್ಲಿ ಹೆಚ್ಚುವರಿಯಾಗಿದ್ದ ಕಲಿಕಾ ಚೇತರಿಕೆ ಈ ವರ್ಷ ಇಲ್ಲದಿರುವುದು ಮತ್ತು ಈ ವರ್ಷ ದಸರಾ ರಜೆ ಹೆಚ್ಚಾಗಿರುವುದರಿಂದ ಶಾಲಾ ದಿನಗಳು ಕಡಿಮೆಯಾಗಿವೆ.

2022-23ರ ಶೈಕ್ಷಣಿಕ ವರ್ಷದಲ್ಲಿ 270 ಕರ್ತವ್ಯದ ದಿನಗಳಿದ್ದವು. ಆದರೆ ಈ ವರ್ಷ 244 ಶಾಲಾ ದಿನಗಳು ಇವೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಶಾಲಾ ಕರ್ತವ್ಯ ದಿನಗಳಲ್ಲಿ ಭಾರೀ ಕಡಿತವಾಗಿದೆ. ಅದೇ ರೀತಿ ಕಲಿಕಾ ದಿನಗಳಲ್ಲಿಯೂ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ 48 ದಿನಗಳಷ್ಟು ಕಡಿಮೆಯಾಗಿವೆ.

ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ನಿಗದಿ. ದಾಖಲಾತಿಗೆ 6 ವರ್ಷ ಕಡ್ಡಾಯ
ಹೀಗಾಗಿ ಹೆಚ್ಚುವರಿಯಾಗಿ 26 ರಜಾ ದಿನಗಳು ಈ ವರ್ಷ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸಿಗಲಿದೆ. ಒಟ್ಟಾರೆಯಾಗಿ ಕಳೆದ ವರ್ಷ ಶೇಕಡ 74ರಷ್ಟು ದಿನ ಶಿಕ್ಷಣ ಸಂಬಂಧಿ ಚಟುವಟಿಕೆಗಳು ನಡೆದಿದ್ದರೆ, ಈ ವರ್ಷ ಶೇಕಡ 67 ರಷ್ಟು ದಿನ ಶಾಲಾ ದಿನಗಳು ನಡೆಯಲಿವೆ.

ಕಳೆದ ವರ್ಷ ಕೊರೊನಾ ಕಾರಣದಿಂದ ಮಕ್ಕಳ ಶೈಕ್ಷಣಿಕೆ ಪ್ರಗತಿಗೆ ಆಗಿರುವ ಹಿನ್ನಡೆಯನ್ನು ಸರಿದೂಗಿಸಲು ಮೇ ತಿಂಗಳ 14 ರಿಂದ ಶಾಲಾ ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗಿತ್ತು. ಮೇ ತಿಂಗಳಲ್ಲಿ ಸುಮಾರು 14 ದಿನ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಆದರೆ, ಈ ಬಾರಿ ಕೊರೊನಾ ಕಡಿಮೆಯಾದ ಕಾರಣ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಮೇ 29, 2023 ರಿಂದ ಶಾಲೆಗಳು ಆರಂಭವಾಗಲಿವೆ.

180 ಕಲಿಕಾ ದಿನಗಳು
ಈ ಶೈಕ್ಷಣಿಕ ವರ್ಷ 180 ಕಲಿಕಾ ದಿನಗಳು ಮಾತ್ರ ಇರಲಿವೆ. ಕಳೆದ ವರ್ಷ 228 ಕಲಿಕಾ ದಿನಗಳಿದ್ದವು. ಈ ಶೈಕ್ಷಣಿಕ ವರ್ಷದಲ್ಲಿ 244 ಶಾಲಾ ಕರ್ತವ್ಯದ ದಿನಗಳನ್ನು ಶಿಕ್ಷಣ ಇಲಾಖೆ ನಿಗದಿ ಪಡಿಸಿದೆ. ಇದರಲ್ಲಿ ಬೋಧನಾ-ಕಲಿಕೆ ಪ್ರಕ್ರಿಯೆಗೆ ಕೇವಲ 180 ದಿನಗಳು ಉಳಿಯಲಿವೆ. ಉಳಿದಂತೆ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಪ್ರಕ್ರಿಯೆಗಳಿಗಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳು/ ಪಠ್ಯ ಚಟುವಟಿಕೆಗಳು/ ಸ್ಪರ್ಧೆಗಳ ನಿರ್ವಹಣೆ ಕಾರ್ಯಕ್ಕಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು ಮತ್ತು ಶಾಲಾ ಸ್ಥಳೀಯ ರಜೆಗಳು ಎಂದು 4 ದಿನಗಳನ್ನು ನಿಗದಿಪಡಿಸಲಾಗಿದೆ.

ಈ ಬಾರಿ 20 ದಿನ ದಸರಾ ರಜೆ
ಹೌದು, ಈ ಬಾರಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ 20 ದಿನಗಳ ಕಾಲ ದಸರಾ ರಜೆ ಸಿಗಲಿವೆ. ಈ ವರ್ಷ ಅಕ್ಟೋಬರ್ 8 ರಿಂದ ಅಕ್ಟೋಬರ್ 25ರ ವರೆಗೆ ಒಟ್ಟು 20 ದಿನ ರಜೆ ಇರಲಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 16ರ ವರೆಗೆ ಅಂದರೆ ಒಟ್ಟು 14 ದಿನ ಮಾತ್ರ ರಜೆ ನೀಡಲಾಗಿತ್ತು.

Leave a Reply

error: Content is protected !!