ನೆಲ್ಯಾಡಿ: ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅನುಷ್ಠಾನ ಸಮಿತಿ ಸಭೆ ಏಪ್ರಿಲ್ 19ರಂದು ಜರುಗಿತು.
ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ನೇಮಕಗೊಂಡಿರುವ ಡಾ.ಸುರೇಶ್ ಅವರನ್ನು ಅಭಿನಂದನೆಗಳ ಮೂಲಕ ಸ್ವಾಗತಿಸಲಾಯಿತು. ಪ್ರಾಂಶುಪಾಲರಾದ ಡಾ.ಸುರೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ 2023-24ನೇ ಶೈಕ್ಷಣಿಕ ವರ್ಷದ ಪ್ರಕ್ರಿಯೆ ಮತ್ತು ಕಾಲೇಜಿನ ಅಭಿವೃದ್ಧಿಗೆ ಸಂಬಂಧಿಸಿದ ಇನ್ನಿತರ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್ ಅವರು ಕಾಲೇಜಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು.
ಕಾರ್ಯದರ್ಶಿ ಶಿವಪ್ರಸಾದ್, ಅನುಷ್ಠಾನ ಸಮಿತಿ ಸದಸ್ಯರು, ಜಿ.ಪಂ. ಮಾಜಿ ಸದಸ್ಯರಾದ ಪಿ.ಪಿ ವರ್ಗೀಸ್, ಕಾಲೇಜು ಕಟ್ಟಡ ಮಾಲೀಕರಾದ ರವಿಚಂದ್ರ ಹೊಸವಕ್ಲು, ನೆಲ್ಯಾಡಿ ವರ್ತಕರ ಸಂಘದ ಉಪಾಧ್ಯಕ್ಷರಾದ ಗಣೇಶ್ ಕೆ.ರಶ್ಮಿ, ಸತೀಶ್ ದುರ್ಗಾಶ್ರೀ, ಉಪನ್ಯಾಸಕರಾದ ಜಾನ್ ಪಿ.ಎಸ್ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.
ಕಾಲೇಜಿನ ಸಹ ಸಂಯೋಜಕರಾದ ಡಾ.ಸೀತಾರಾಮ.ಪಿ ಸ್ವಾಗತಿಸಿದರು.ಕನ್ನಡ ವಿಭಾಗದ ಉಪನ್ಯಾಸಕರಾದ ಡಾ.ನೂರಂದಪ್ಪ ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದರು.