ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ ಬಂಗೇರ

ಶೇರ್ ಮಾಡಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ ಬಂಗೇರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಡಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಮತಯಾಚನೆ ಮಾಡಿ ಮಾತನಾಡಿದ ಬಂಗೇರರು, ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು. ಎಂ ಎಲ್ ಸಿ ಹರೀಶ್ ಕುಮಾರ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಾದರೆ ರಕ್ಷಿತ್ ಶಿವರಾಂ ಗೆಲ್ಲಬೇಕು. ಕರಾವಳಿ ಜಿಲ್ಲೆಗಳಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಅದು ಬೆಳ್ತಂಗಡಿ ತಾಲೂಕಿನಿಂದಲೇ ಶುರುವಾಗಲಿದೆ. ಮತಯಾಚನೆ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶೇಖರ್ ಕುಕ್ಯಾಡಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಸುಶೀಲಾ, ಕುಕ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪದ್ಮನಾಭ್, ಬಳಂಜೆ ಪಂಚಾಯಿತಿ ಸದಸ್ಯರು ರವೀಂದ್ರ ಬಿ ಅಮೀನ್, ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

See also  ಅರಂತೋಡು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಲವಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾದ ಅರಂತೋಡು ಕಾಲೇಜು

Leave a Reply

Your email address will not be published. Required fields are marked *

error: Content is protected !!