ಸುಳ್ಯ: ಪಯಸ್ವಿನಿ ನದಿಯಲ್ಲಿ ಮುಳುಗಿ ನಿವೃತ್ತ ಶಿಕ್ಷಕ ಮೃತ್ಯು

ಶೇರ್ ಮಾಡಿ

ಸುಳ್ಯ: ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ನಿವೃತ್ತ ಶಿಕ್ಷಕರೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಆಲೆಟ್ಟಿ‌ ಗ್ರಾಮದ ಅರಂಬೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ ಕೆ.(65) ಮೃತಪಟ್ಟವರು.
ಇವರು ರವಿವಾರ(ಎ.30) ಬೆಳಗ್ಗೆ 6 ಗಂಟೆ ಸುಮಾರಿಗೆ ಮನೆಯಿಂದ ಪಯಸ್ವಿನಿ‌ ನದಿಯಲ್ಲಿ ಸ್ನಾನ ಮಾಡಿಕೊಂಡು ಬರುವುದಾಗಿ ಹೇಳಿ ಹೋದವರು ತುಂಬಾ ಹೊತ್ತಾದರೂ ವಾಪಸ್ ಬಂದಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಮಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದರು ಪ್ರಯೋಜನವಾಗಿರಲಿಲ್ಲ. ಸಂಜೆಯ ವೇಳೆ ಅವರ ಮೃತದೇಹ ಮಜಿಗುಂಡಿ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿದ ಬಳಿಕ ಸುಳ್ಯ ವಲಯದ ವಿಪತ್ತು ನಿರ್ವಹಣಾ ಘಟಕದವರು ಹಾಗೂ ಸ್ಥಳೀಯರು ನದಿಯಿಂದ ಮೃತದೇಹವನ್ನು ಮೇಲೆಕ್ಕೆತ್ತಿದರು.
ಅಡ್ಕಾರ್, ಅರಂಬೂರು, ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ದಿನೇಶ್ 2020ರಲ್ಲಿ ನಿವೃತ್ತರಾಗಿದ್ದರು.
ಮೃತರು ಪತ್ನಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Reply

error: Content is protected !!