ಉಪ್ಪಿನಂಗಡಿ: ಎರಡು ದ್ವಿಚಕ್ರ ವಾಹನಗಳ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆಗೇಟು ಬಳಿ ಮೇ 1ರ ಸಂಜೆ ಸಂಭವಿಸಿದೆ.
ಮೂಲತಃ ಮಂಡ್ಯ ನಿವಾಸಿ ಮಹೇಶ(37) ಹಾಗೂ ಮತ್ತೊಂದು ದ್ವಿಚಕ್ರ ವಾಹನದಲ್ಲಿದ್ದ ಬನ್ನೂರು ನಿವಾಸಿ ಬಿಜು ಕುಮಾರ್(47) ಅಪಘಾತದಲ್ಲಿ ಗಾಯಗೊಂಡವರು.
ಇವೆರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭ ಸವಾರರು ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾರೆ. ಮಹೇಶ್ ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಹಾಗೂ ಬಿಜು ಕುಮಾರ್ ರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.