ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಶೇರ್ ಮಾಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ ( ಮೇ.8 ರಂದು) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ.

ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಹಾಸನ 3ನೇ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು ಗ್ರಾ.ಜಿಲ್ಲೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆ 18ನೇ ಸ್ಥಾನವನ್ನು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ 19ನೇ ಸ್ಥಾನವನ್ನು ಪಡೆದುಕೊಂಡಿದೆ.

ಎ+ ಗ್ರೇಡ್‌ ನಲ್ಲಿ ಒಟ್ಟು 61,003 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ರಾಜ್ಯದ 23 ಶಾಲೆಗಳು ಎ ಗ್ರೇಡ್‌ ಪಡೆದುಕೊಂಡಿದೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಸರ್ಕಾರಿ ಶಾಲೆಗಳು ನೂರಕ್ಕೆ ನೂರು ಫಲಿತಾಂಶ ಪಡೆದಿದ್ದು, ಖಾಸಗಿ ಮತ್ತು ಅನುದಾನಿತ ಶಾಲೆಗಳು ಸೇರಿ ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.

Leave a Reply

error: Content is protected !!