ಬಿಗಿ ಭದ್ರತೆಯಲ್ಲಿ ಮತದಾನಕ್ಕೆ ಸಜ್ಜಾದ ದಕ್ಷಿಣ ಕನ್ನಡ ಜಿಲ್ಲಾಡಳಿತ

ಶೇರ್ ಮಾಡಿ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯಲಿದ್ದು. ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೊನೆ ಹಂತದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಈಗಾಗಲೇ ಅಭ್ಯರ್ಥಿಗಳು ನಾನಾ ರೀತಿಯಲ್ಲಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಯಾವುದೇ ಗೊಂದಲವಿಲ್ಲದೆ, ಸುಸೂತ್ರವಾಗಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಯನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಒಬ್ಬ ಸಿಆರ್ ಓ ಮತ್ತು ನಾಲ್ಕು ಮಂದಿ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ನಿಯೋಜಿಸಲಾಗಿದೆ.

ಮಂಗಳೂರಿನ ಉರ್ವ ಕೆನರಾ ಹೈಸ್ಕೂಲ್ ಆವರಣದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ 224 ಮತಗಟ್ಟೆಗಳಿಗೆ ಅಗತ್ಯವಿರುವ ಸಿಬ್ಬಂದಿ ನಿಯೋಜನೆ ಹಾಗೂ ಇತರ ಸಿದ್ಧತೆಗಳನ್ನು ಇಂದು ಮುಂಜಾನೆಯಿಂದಲೇ ಮಾಡಿಕೊಳ್ಳಲಾಗುತ್ತಿದೆ. ಬೇರೆ ಬೇರೆ ತಾಲೂಕುಗಳಿಗೆ ಸಿಬ್ಬಂದಿಗಳು ಬಸ್ ಗಳ ಮೂಲಕ ಬರುತ್ತಿದ್ದಾರೆ.
ಇದೀಗಾಗಲೇ ಸಿಬ್ಬಂದಿಗಳಿಗೆ ವಿಶೇಷ ತರಬೇತಿಯನ್ನು ನೀಡಲಾಗಿದ್ದು ಅವರಿಗೆ ಇವಿಎಂ ಮೆಷಿನ್ ಸೇರಿದಂತೆ ಎಲ್ಲಾ ವಸ್ತುಗಳನ್ನು ನೀಡಲಾಗುತ್ತಿದ್ದು, ಮಧ್ಯಾಹ್ನದಿಂದ ಪೋಲಿಸ್ ಬಿಗು ಭದ್ರತೆಯಲ್ಲಿ ಆಯಾ ಕ್ಷೇತ್ರಗಳ ಮತಗಟ್ಟೆಗಳಿಗೆ ಕಳಿಸಿಕೊಡಲಾಗುತ್ತಿದೆ.
ಮತದಾನ ಕೇಂದ್ರಕ್ಕೆ ನಿಯೋಜಿಸಲಾಗಿರುವ ಸಿಬ್ಬಂದಿಗಳಿಗೆ ಮತ ಚಲಾಯಿಸಲು ಪ್ರತ್ಯೇಕವಾಗಿ ಅಂಚೆ ಮತದಾನಕ್ಕೆ ಅವಸ್ಥೆ ಮಾಡಲಾಗಿದೆ.

ಸಿಬ್ಬಂದಿಗಳು ನಾಳೆ ಬೆಳಿಗ್ಗೆ 5:30ಕ್ಕೆ ಅವರು ಮತದಾನ ಪ್ರಕ್ರಿಯೆ ಕರ್ತವ್ಯ ನಿರ್ವಹಣೆ ಆರಂಭಿಸಲಿರುವರು.

Leave a Reply

error: Content is protected !!