




ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಎರಡು ಕಾರು ಪಲ್ಟಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

