ಪುತ್ತೂರು : ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಚಿತ್ರಕ್ಕೆ ಚಪ್ಪಲಿ ಹಾರಹಾಕಿ ಶೃದ್ಧಾಂಜಲಿ ಅರ್ಪಿಸಿ ಪ್ಲೆಕ್ಸ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ಬಳಿಕ ಅವರು ನೀಡಿದ ಮಾಹಿತಿಯಂತೆ 7 ಮಂದಿಯನ್ನು ಬಂಧಿಸಿತ್ತು.
ಇದಕ್ಕೆ ಸಂಬಂಧಪಟ್ಟಂತೆ ಫೋಟೋ, ವಿಡಿಯೋ,ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಠಾಣೆಯಲ್ಲಿ ಕೂಡಿ ಹಾಕಿ ತೀವ್ರವಾಗಿ ಥಳಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕರ ಹಾಗೂ ಕೆಲವು ಪ್ರಭಾವಿಗಳ ಒತ್ತಡಕ್ಕೊಳಗಾಗಿ ಪೊಲೀಸರು ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹಾಗೂ ನಗರಸಭೆ ನೀಡಿದ ದೂರಿನ್ವಯ ನರಿಮೊಗರು ಗ್ರಾಮದ ನಿವಾಸಿಗಳಾಗಿದ್ದ ವಿಶ್ವನಾಥ ಮತ್ತು ಮಾಧವ, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷೀತ್, ಗುರುಪ್ರಸಾದ್ ಆರೋಪಿಗಳನ್ನು ಬಂಧಿಸಲಾಗಿತ್ತು.
ವಿಚಾರಣೆ ವೇಳೆ ವಶಕ್ಕೆ ಪಡೆದವರಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಲಾಗಿದ್ದು. ಥಳಿತದಿಂದ ಗಾಯಗೊಂಡ ಯುವಕರ ಚಿತ್ರಗಳು ಹಾಗೂ ತಡರಾತ್ರಿ ಪುತ್ತೂರು ಡಿವೈಎಸ್ ಪಿ ಕಚೇರಿಯಿಂದ ನಡೆದಾಡಲೂ ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೊದಲ್ಲಿ ಕಾಲು, ಬೆನ್ನು ಸೊಂಟದ ಹಿಂಭಾಗದಲ್ಲಿ ಥಳಿಸಿರುವುದು ಕಾಣುತ್ತಿದೆ.