ನೇಸರ ಜ.6: ಕಡಬ ಸರಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಸಂಘದ ಅಧ್ಯಕ್ಷ ವಿಮಲ್ ಕುಮಾರ್ ನೆಲ್ಯಾಡಿ ಹಾಗೂ ಪದಾಧಿಕಾರಿಗಳು ಸೇರಿ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರರಿಗೆ ಕಡಬದಲ್ಲಿ ಮನವಿ ಸಲ್ಲಿಸಲಾಯಿತು.
ಸರಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರ ನಿರ್ದೇಶನದ ಮೇರೆಗೆ ಈ ಮನವಿಯನ್ನು ನೀಡಲಾಯಿತು.
ಕೇಂದ್ರ ಸರಕಾರಿ ನೌಕರರ ಸರಿಸಮಾನ ವೇತನವನ್ನು ರಾಜ್ಯ ಸರಕಾರಿ ನೌಕರರಿಗೆ ಜಾರಿಗೊಳಿಸಬೇಕು.
ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು.
ಸರಕಾರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಬೇಕು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಪಡುಬೆಟ್ಟು,ಕೋಶಾಧಿಕಾರಿ ಶೇಷಾದ್ರಿ,ರಾಜ್ಯ ಪರಿಷತ್ ಸದಸ್ಯ ಮಾಮಚ್ಚನ್, ಗೌರವಾಧ್ಯಕ್ಷರ ರಾಮಕೃಷ್ಣ ಮಲ್ಲಾರ, ಉಪಾಧ್ಯಕ್ಷ ಅಬ್ದುಲ್ ಖಾದರ್, ಮಂಗಳೂರು ವಿಭಾಗದ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಸಂತೋಷ ರೈ, ಕಂದಾಯ ಇಲಾಖೆಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮನೋಹರ್, ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಸರಕಾರಿ ಇಲಾಖೆಯ ನೌಕರರು ಉಪಸ್ಥಿತರಿದ್ದರು.