




ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. ಆದಾಗ್ಯೂ, 2,000 ರೂ. ಮುಖಬೆಲೆಯ ಬ್ಯಾಂಕ್ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತದೆ ಎಂದು ಆರ್‌ಬಿಐ ಹೇಳಿದೆ.

ಜನರು ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ. RBI 19 ಪ್ರಾದೇಶಿಕ ಕಚೇರಿಗಳು ಮೇ 23 ರಿಂದ ಕಡಿಮೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯಕ್ಕಾಗಿ 2,000 ರೂ.ನೋಟುಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸುತ್ತದೆ. ಎಲ್ಲಾ ಬ್ಯಾಂಕ್‌ಗಳು ಸೆಪ್ಟೆಂಬರ್ 30, 2023 ರವರೆಗೆ 2000 ರೂ. ನೋಟುಗಳ ಠೇವಣಿ /ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈ ಕ್ರಮದ ಹಿಂದಿನ ತಾರ್ಕಿಕತೆಯನ್ನು ವಿವರಿಸಿದ್ದು ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಹೇಳಿದೆ.
ಕಪ್ಪು ಹಣ ಮತ್ತು ಭಾರಿ ಪ್ರಮಾಣದಲ್ಲಿ ಕೋಟಾ ನೋಟು ಮತ್ತು ಭ್ರಷ್ಟಾಚಾರಕ್ಕೆ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
2018-19ರಲ್ಲಿ 2000 ರೂ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿತ್ತು. 2000 ಮುಖಬೆಲೆಯ ಬ್ಯಾಂಕ್ ನೋಟುಗಳಲ್ಲಿ ಸುಮಾರು 89% ಅನ್ನು ಮಾರ್ಚ್ 2017 ಕ್ಕಿಂತ ಮೊದಲು ನೀಡಲಾಗಿತ್ತು ಅವುಗಳ ಅಂದಾಜು ಜೀವಿತಾವಧಿ 4-5 ವರ್ಷಗಳ ಅಂತ್ಯದಲ್ಲಿದೆ.
ಚಲಾವಣೆಯಲ್ಲಿರುವ ಈ ಬ್ಯಾಂಕ್ ನೋಟುಗಳ ಒಟ್ಟು ಮೌಲ್ಯ ಮಾರ್ಚ್ 31, 2018 (37.3%) ಗರಿಷ್ಠ 6.73 ಲಕ್ಷ ಕೋಟಿ ರೂ.ಗಳಿಂದ 3.62 ಲಕ್ಷ ಕೋಟಿ ರೂ.ಗೆ ಇಳಿದಿದೆ, ಮಾರ್ಚ್ 31, 2023 ರಂದು ಚಲಾವಣೆಯಲ್ಲಿರುವ ನೋಟುಗಳ ಕೇವಲ 10.8% ರಷ್ಟಿದೆ.

