ಡಿ.ಕೆ.ಶಿವಕುಮಾರ್‌ ವಿಧಾನಸೌಧ ಪ್ರವೇಶಿಸುವ ಮುನ್ನ ಮಾಡಿದ್ದೇನು?

ಶೇರ್ ಮಾಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು 9 ವರ್ಷಗಳ ಹಿಂದೆ ಲೋಕಸಭೆಗೆ ಆಯ್ಕೆಯಾಗಿ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುವ ಮುನ್ನ ಬಾಗಿಲುಗಳಿಗೆ ನಮಸ್ಕರಿಸಿದಂತೆ ಶನಿವಾರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಅವರು ವಿಧಾನಸೌಧ ಪ್ರವೇಶಿಸುವ ಮುನ್ನ ಬಾಗಿಲುಗಳಿಗೆ ನಮಸ್ಕರಿಸಿದರು.

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ವಿಧಾನಸೌಧಕ್ಕೆ ಆಗಮಿಸಿದರು. ವಿಧಾನಸೌಧ ಆವರಣ ಪ್ರವೇಶಿಸಿ ಸಂಪುಟ ಸಭೆಗೆ ತೆರಳುವ ಮುನ್ನ ವಿಧಾನಸೌಧದ ಮೆಟ್ಟಿಲುಗಳಿಗೆ ಶಿರಭಾಗಿ ಸಾಷ್ಟಾಂಗ ನಮಸ್ಕರಿಸಿದರು. ಬಳಿಕ ವಿಧಾನಸೌಧದ ಒಳಗೆ ಪ್ರವೇಶಿಸಿದರು.

Leave a Reply

error: Content is protected !!