ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಸಂಭ್ರಮೋತ್ಸವ

ಶೇರ್ ಮಾಡಿ

ಕೊಕ್ಕಡ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಕೊಕ್ಕಡದಲ್ಲಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಕಾರ್ಯಕರ್ತರ ಸಂಭ್ರಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ, ಕಾರ್ಯಕರ್ತರು ಮತದಾರರಿಗೆ ಹಣ, ಹೆಂಡ ಹಂಚುವ ಮೂಲಕ ಸರಕಾರಿ ಅಧಿಕಾರಿಗಳನ್ನು ಬಳಸಿಕೊಂಡು ತಾಲೂಕಿನಲ್ಲಿ ಜಯ ಗಳಿಸಿದರು. ಅದರೆ ರಾಜ್ಯದ ಮತದಾರರು ರಾಜ್ಯದಲ್ಲಿನ ಬಿಜೆಪಿ ಭ್ರಷ್ಟ ಸರಕಾರದಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ಸರಕಾರಕ್ಕೆ ಆಶೀರ್ವದಿಸಿದರು. ಕಾಂಗ್ರೆಸ್ ಪಕ್ಷದಿಂದ ಬಡವರಿಗೆ 5 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ಆದಷ್ಟೂ ಬೇಗನೆ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಸದಾ ಸಹಕಾರ ನೀಡುವುದಾಗಿ ಹೇಳಿದರು. ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಬಳಿಕ ಕೊಕ್ಕಡದ ಜೋಡುಮಾರ್ಗದಿಂದ ಕೊಕ್ಕಡ ಪೇಟೆಯವರೆಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಸಂತ ಬಂಗೇರ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಭಾಗಿಯಾದರು, ಕಾರ್ಯಕರ್ತರು ದಾರಿಯುವುದಕ್ಕೂ ಸಿಹಿತಿಂಡಿಯನ್ನು ಹಚ್ಚಿ, ಪಟಾಕಿಯನ್ನು ಹಚ್ಚಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕುಣಿದು ಕುಪ್ಪಳಿಸಿ, ಸಂಭ್ರಮದ ಆಚರಣೆ ಮಾಡಿದರು.

Leave a Reply

error: Content is protected !!