ತಲವಾರು ದಾಳಿ- ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು

ಶೇರ್ ಮಾಡಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ಘಟನೆ ನಡೆದಿದೆ.

ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿ ನಡೆದಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ದಾಳಿ ನಡೆದಿದ್ದು, ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ.
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ನೆಲ್ಯಾಡಿ: ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Leave a Reply

Your email address will not be published. Required fields are marked *

error: Content is protected !!