ಮಾಣಿ: ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ

ಶೇರ್ ಮಾಡಿ

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ನಡೆದ ಜಗಳದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆಯೇ ಹೊರತು, ತಲವಾರಿನಿಂದಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!