ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ರವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಶೇರ್ ಮಾಡಿ

ನೆಲ್ಯಾಡಿ: ಅತ್ಯಂತ ಪ್ರತಿಷ್ಠತೆಯ ಪ್ರಶಸ್ತಿಗಳಲ್ಲಿ ಒಂದಾದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಬಹುಮುಖ ಪ್ರತಿಭೆಯ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಕಲಾವಿದ ವಿಶ್ವನಾಥ್ ಶೆಟ್ಟಿ ಕೆ. ಅವರಿಗೆ ಮೇ 25ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ| ಮಹೇಶ್ ಜೋಷಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಟಿ.ಎಸ್.ನಾಗಾಭರಣ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ|ಹೆಚ್.ಎಲ್.ಎನ್ ರಾವ್‌ರವರ ಸಮಕ್ಷಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

See also  ರಾಷ್ಟ್ರಮಟ್ಟದ ಕಲೋತ್ಸವ “ಪ್ರತಿಭಾ ದೀಪ ಸಮ್ಮಾನನಮ್” ಸನ್ಮಾನ ಕಾರ್ಯಕ್ರಮ

Leave a Reply

Your email address will not be published. Required fields are marked *

error: Content is protected !!