ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಪರವಾಗಿ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಎಂಬಾತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಅಲ್ಲದೆ ಹರೀಶ್ ಪೂಂಜಾ ಅವರ ವಿಜಯೋತ್ಸವದಲ್ಲಿ ಭಾಗವಹಿಸಿರುವ ವೀಡಿಯೊ ವೈರಲ್ ಆಗಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ದೂರು ನೀಡಿದ್ದರು.
ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯವರಿಗೆ ಸೂಚನೆ ನೀಡಿದ್ದರು.
ಇದೀಗ ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಅವರು ನಾಗೇಶ್ ನನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.