ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು

ಶೇರ್ ಮಾಡಿ

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ.
ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ( 9) ಜೀವ ಕಳೆದುಕೊಂಡವಳು.

ಮೇ 26ರ ಸಂಜೆ 4:00 ಗಂಟೆಗೆ ಮನೆ ಪರಿಸರದಲ್ಲಿ ಸಂಬಂಧಿಕ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿತ್ತು.

ತುರ್ತು ಚಿಕಿತ್ಸೆಗೆಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಆರೋಗ್ಯ ತಪಾಸಣೆ ನಡೆಸಿದ್ದು ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!